ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ; 3 ಸಾವು

ವಿಜಯಪುರ:

    ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ.

    KA 28, Z 0379 ನಂಬರಿನ ಕಾರು ಚಾಲಕನ ಅತಿವೇಗದಿಂದ ಅಪಘಾತ ಸಂಭವಿಸಿದೆ ಎನ್ನಲಾಗದೆ. ಸದ್ಯ ಶವಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದಲ್ಲಿ ಉಮೇಶ್ ಭಜಂತ್ರಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.