ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಸರಣಿ ಅಪಘಾತ, ಮೂವರು ಸಾವು

ಬೆಂಗಳೂರು :

    ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ  ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯೊಂದರ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

   ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಕೂಡಲೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಭಾನುವಾರ ರಾತ್ರಿ ವೀಕೆಂಡ್‌ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ವಾಹನಗಳ ದಟ್ಟಣೆಯೂ ಹೆಚ್ಚಿಗಿತ್ತು. ಲಾರಿ ಚಾಲಕನ ಅವಸರದಿಂದ ಅಪಘಾತ ಸಂಭವಿಸಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Recent Articles

spot_img

Related Stories

Share via
Copy link