ತುಮಕೂರು : ಕಾರು ಬೈಕ್‌ ಡಿಕ್ಕಿ : 3 ಸಾವು

ತುಮಕೂರು: 

    ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.

    ತುಮಕೂರಿನ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ತಿಪಟೂರು ಮೂಲದ 21 ವರ್ಷದ ನರಸಿಂಹ ಮೂರ್ತಿ, 21 ವರ್ಷದ ಅನಿಲ್ ಕುಮಾರ್ ಮತ್ತು 19 ವರ್ಷದ ಕಾವ್ಯ ಎಂದು ಗುರುತಿಸಲಾಗಿದೆ.

    ಆದಿಚುಂಚನಗಿರಿ ಮಠಕ್ಕೆ ಸ್ಕೂಟರ್‌ನಲ್ಲಿ ತೆರಳಿದ್ದ ಮೂವರು ಸ್ನೇಹಿತರು ವಾಪಸ್ಸಾಗುತ್ತಿದ್ದಾಗ ಜೋಡಗಟ್ಟೆ ಬಳಿ ಸ್ಕೂಟರ್‌-ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಅಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.

    ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link