ಪುಣೆ
ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ ಏಳು ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಈ ಅವಘಡಕ್ಕೆ ಪ್ರಾಥಮಿಕ ಕಾರಣ ದಟ್ಟವಾದ ಮಂಜು ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಅಪಘಾತದ ನಂತರ ಹೆಲಿಕಾಪ್ಟರ್ಗೆ ಬೆಂಕಿ ಹೊತ್ತಿಕೊಂಡಿದೆ, ಇದರಿಂದಾಗಿ ಮೂವರ ದೇಹವೂ ಸುಟ್ಟು ಕರಕಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಆದೇಶ ನೀಡಲಾಗಿದೆ. ಈ ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ.
ಇದು ಯಾರ ಹೆಲಿಕಾಪ್ಟರ್ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೆಲಿಕಾಪ್ಟರ್ನಲ್ಲಿನ ಬೆಂಕಿಯನ್ನು ಇನ್ನೂ ನಂದಿಸಲಾಗಿಲ್ಲ. ಕಳೆದ 40 ದಿನಗಳಲ್ಲಿ ಪುಣೆಯಲ್ಲಿ ಇದು ಎರಡನೇ ಘಟನೆಯಾಗಿದೆ.
ಈ ಹಿಂದೆ ಆಗಸ್ಟ್ 24 ರಂದು ಪುಣೆಯ ಪೌಡ್ ಪ್ರದೇಶದಲ್ಲಿ ಇದೇ ರೀತಿಯ ಹೆಲಿಕಾಪ್ಟರ್ ಪತನವಾಗಿತ್ತು. ಆಗ ಈ ಹೆಲಿಕಾಪ್ಟರ್ ಮುಂಬೈನಿಂದ ಹೈದರಾಬಾದ್ಗೆ ಹೋಗುತ್ತಿತ್ತು. ಪೈಲಟ್ ಮತ್ತು ಇತರ ಮೂವರು ಪ್ರಯಾಣಿಕರು ಸಹ ವಿಮಾನದಲ್ಲಿದ್ದರು. ಅಪಘಾತದಲ್ಲಿ ಪೈಲಟ್ ಗಾಯಗೊಂಡಿದ್ದಾರೆ. ಆದರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿರಲಿಲ್ಲ.
