ಫುಟ್ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್‌ : 3 ಸಾವು

ನವದೆಹಲಿ:

    ಫುಟ್ಪಾತ್ ಮೇಲೆ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಮುಂಜಾನೆ 4.30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ವೊಂದು ನೇರವಾಗಿ ಫುಟ್‌ಪಾತ್‌ ಮೇಲೆ ಹತ್ತಿದ್ದು, ಅಲ್ಲಿ ಮಲಗಿದ್ದ ಐವರ ಮೇಲೆ ಹರಿದಿದೆ.

   ಈ ವೇಳೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಗಾಯಗೊಂಡವರನ್ನು ಶಾಸ್ತ್ರಿ ಪಾರ್ಕ್ ಕೊಳೆಗೇರಿ ನಿವಾಸಿಗಳಾದ ಮುಸ್ತಾಕ್ (35), ಗಾಂಧಿನಗರ ನಿವಾಸಿ ಕಮಲೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಅದರ ದಾಖಲೆಗಳ ಮೂಲಕ ಮಾಲೀಕರನ್ನು ಸಂಪರ್ಕಿಸುತ್ತಿದ್ದಾರೆ. ಚಾಲಕ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಕಾರಣದ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಸಮೀಪದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ನಿರ್ಲಕ್ಷ್ಯದ ಚಾಲನೆಯಿಂದ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Recent Articles

spot_img

Related Stories

Share via
Copy link