ಮಾಂಸಕ್ಕಾಗಿ ನವಿಲುಗಳ ಮಾರಣಹೋಮ : 3ಜನರ ಬಂಧನ

ತುಮಕೂರು

      ಮಾರನಾಯಕನಪಾಳ್ಯ ಗ್ರಾಮದಲ್ಲಿ ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಬಂಧಿತರನ್ನು ಬಿಟ್ಟಿಂಗ್ ನಾಯಕ್, ಬೈಶಕ್ ದಾವು ಮತ್ತು ದುಬಾ ಕಪಟ್ ಎಂದು ಗುರುತಿಸಲಾಗಿದೆ.

     ಅಧಿಕಾರಿಗಳ ಪ್ರಕಾರ, ಆರೋಪಿಗಳು ಮಾರನಾಯಕನಪಾಳ್ಯದ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ‘ಗಟ್ಟಿಮುಟ್ಟಾದ ಮತ್ತು ರುಚಿಕರ’ ಮಾಂಸಕ್ಕಾಗಿ ನವಿಲುಗಳನ್ನು ಕೊಂದಿದ್ದಾರೆ ಎನ್ನಲಾಗಿದೆ. 

     ಗ್ರಾಮದಲ್ಲಿ ನವಿಲುಗಳ ಮಾರಣಹೋಮ ನಡೆಸುತ್ತಿದ್ದು, ಈ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.ಪೊಲೀಸರು 1.5 ಕಿಲೋಗ್ರಾಂ ಹಸಿ ನವಿಲು ಮಾಂಸ, ಎರಡು ಕತ್ತರಿಸಿದ ಕಾಲುಗಳು ಮತ್ತು ಬೇಯಿಸಿದ ಪಕ್ಷಿಯ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

    ಜೊತೆಗೆ ನವಿಲು ಹಿಡಿಯಲು ಬಳಸುತ್ತಿದ್ದ ಬಲೆಗಳು, ಬಲೆ ಉಪಕರಣಗಳು ಮತ್ತು ಮಾಂಸ ಬೇಯಿಸಲು ಬಳಸುತ್ತಿದ್ದ ಪಾತ್ರೆಗಳನ್ನೂ ವಶಪಡಿಸಿಕೊಳ್ಳಲಾಗಿದೆ.ಮಾಂಸವನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap