ಕುಲ್ಗಾಮ್ ನಲ್ಲಿ ಎನ್‌ ಕೌಂಟರ್‌ : 3 ಉಗ್ರರ ಫಿನಿಶ್…..!

ಶ್ರೀನಗರ:

    ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆದಿದ್ದು, ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಮೋಸ್ಟ್‌ ವಾಂಟೆಡ್‌ ಭಯೋತ್ಪಾದಕ ಸೇರಿ ಮೂವರು ಉಗರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

    ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆಂಜು ವರದಿಗಳು ತಿಳಿಸಿವೆ. ಹತರಾದ ಮೂವರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಇದ್ದಾನೆಂದು ತಿಳಿದುಬಂದಿದೆ.

    ರೆಡ್ವಾನಿ ಪಯೀನ್‌ನ ನಿವಾಸಿ ಬಸಿತ್ ಅಹ್ಮದ್ ದಾರ್, ಲಷ್ಕರ್-ಇ-ತೊಯ್ಬಾ (ಎಲ್‌ಇಟಿ) ಆಫ್‌ಶೂಟ್ ಗ್ರೂಪ್ ಮತ್ತು ದಿ ರೆಸಿಸ್ಟೆಂಟ್ ಫ್ರಂಟ್ (ಟಿಆರ್‌ಎಫ್)ನ ಕಮಾಂಡರ್ ಆಗಿದ್ದ. ಈತ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆಗಳಲ್ಲಿ ಭಾಗಿಯಾಗಿದ್ದ.

    ದಾರ್ ಜೊತೆ ಹತ್ಯೆಗೊಳಗಾದ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮೋಮಿನ್ ಗುಲ್ಜಾರ್ ಮತ್ತು ಫಾಹಿಮ್ ಅಹ್ಮದ್ ಬಾಬಾ ಎಂದು ಗುರುತಿಸಲಾಗಿದೆ.

     18 ಹತ್ಯೆಗಳಲ್ಲಿ ಭಾಗಿಯಾಗಿದ್ದವರನ್ನು ಎನ್‌ಕೌಂಟರ್‌ ಮಾಡಿರುವುದು ನಮಗೆ ದೊಡ್ಡ ಸಾಧನೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ, ನಾಗರಿಕರು ಮತ್ತು ಅಲ್ಪಸಂಖ್ಯಾತರು ಸೇರಿದ್ದಾರೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿ ಕೆ ಬಿರ್ಡಿ ತಿಳಿಸಿದ್ದಾರೆ

Recent Articles

spot_img

Related Stories

Share via
Copy link
Powered by Social Snap