3ಸಾವಿರ ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

 ತುಮಕೂರು

    ಮುಂದಿನ ಮೂತು ವರ್ಷಗಳಲ್ಲಿ ರಾಜ್ಯಾದ್ಯಂತ ಮೂರು ಸಾವಿರ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

    ಜಿಲಗಲಾ ಪಂಚಾಯ್ತಿಯಲ್ಲಿಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆ ಪ್ರಗತಿಪರಿಶೀಲನೆ ನಡೆಸಿದ ಅವರು, ರಾಜ್ಯದ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಿದೆ ಈ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.ಪ್ರಸಕ್ತ ವರ್ಷದಲ್ಲೇ 500 ಕೆಪಿಎಸ್ ಶಾಲೆಗಳನ್ನು ಆರಂಭಿಲಾಗುತ್ತಿದೆ ಎಂದರು.
ಕೆಪಿಎಸ್ ಶಾಲೆಗಳನ್ನು ಆರಂಬಿಸುವುದರಿಂದ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 45 ಲಕ್ಷ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿದೆ ಎಂದರು.

    ಕೆಪಿಎಸ್ ಶಾಲೆಗಳನ್ನು ಸಂಪೂರ್ಣವಾಗಿ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯ ಅನುದಾನದಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು ಉತ್ತಮ ಗುಣ ಮಟ್ಟದ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುತ್ತಿದೆ ಎಂದರು.ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಸಂಬಂಧ ಈಗಾಗಲೆ ಆಯಾ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪಟ್ಟಿ ಮಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳು ಪಟ್ಟಿ ಮಾಡುವಾಗ ಆಯಾ ಶಾಸಕರ ಅಭಿಪ್ರಾಯಗಳನ್ನು ಪಡೆಯಬೇಕು ಎಂದು ತಿಳಿಸಿದರು.