24ಗಂಟೆಯಲ್ಲಿ 3095 ಕೊವಿಡ್ ಪ್ರಕರಣ ಪತ್ತೆ….!

ನವದೆಹಲಿ:

     ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,095 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,15,787ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,867ಕ್ಕೆ ಏರಿಕೆಯಾಗಿದೆ.

    ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,208ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,69,711 ಕ್ಕೆ ತಲುಪಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ