335 ಕೋಟಿ ಮೌಲ್ಯದ ಚುನಾವಣಾ ಅಕ್ರಮ ಬಯಲಿಗೆ : ಅಲೋಕ್‌ ಕುಮಾರ್‌

ಬೆಂಗಳೂರು:

     2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡೇ ದಿನಗಳು ಬಾಕಿ ಉಳಿದಿದ್ದು, ರಾಜ್ಯದೆಲ್ಲೆಡೆ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಬಿಗಿ ಭದ್ರತೆ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ವಿಧಾನಸಭೆ ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ರಾಜ್ಯದಾದ್ಯಂತ ಒಟ್ಟು 1.60 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ

    ಭದ್ರತಾ ಕಾರ್ಯದಲ್ಲಿ 304 ಡಿವೈಎಸ್‌ಪಿ, 991 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 2610 ಪಿಎಸ್‌ಐ, 5803 ಎಎಸ್‌ಐ ಸೇರಿದಂತೆ 84,000 ಸಿಬ್ಬಂದಿಗಳ ನಿಯೋಜನೆ ಮಾಡಿದ್ದೇವೆ. ಇವರೊಂದಿಗೆ 8.5 ಸಾವಿರ ಹೋಂ ಗಾರ್ಡ್ಸ್‌, 650 ಸಿಆರ್‌ಪಿಎಫ್ ತುಕಡಿ, ಕೆಎಸ್‌ಆರ್‌ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

    ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಫೈಟರ್ ರವಿ ಸಲ್ಲಿಸಿದ್ದ ಅರ್ಜಿ ವಜಾ ಹೆಚ್ಚಿನ ಭದ್ರತೆಗಾಗಿ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಗೋವಾದಿಂದ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂದೆ ಯಾವ ಚುನಾವಣೆಯಲ್ಲಿಯೂ ಇಷ್ಟೊಂದು ಸಿಬ್ಬಂದಿ ಬಳಸಿಕೊಳ್ಳಲಾಗಿರಲಿಲ್ಲ. ಚುನಾವಣಾಧಿಕಾರಿಗಳ ಕೆಲವು ಮಾನದಂಡಗಳ ಪ್ರಕಾರ ನಿಯೋಜನೆ ಮಾಡಲಾಗಿದೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದರು.

     ಇದೇ ವೇಳೆ ಸೂಕ್ಷ್ಮ ಮತಗಟ್ಟೆ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ವರುಣಾ, ಚಾಮುಂಡೇಶ್ವರಿ, ಹಾಸನ, ಚನ್ನಪಟ್ಟಣ, ಕನಕಪುರ, ಚಿತ್ತಾಪುರ ಕಡೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಕಾರಣಕ್ಕಾಗಿ ಐಪಿಎಸ್ ಅಧಿಕಾರಿಗಳ ಮೂಲಕ 5 ದಿನಗಳಿಂದ ನಿಗಾ ಇಡಲಾಗಿದೆ. 11,617 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿ ಪರಿಗಣಿಸಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

     230 ಕೋಟಿ ಮೌಲ್ಯದ ವಸ್ತು ಮತ್ತು 105 ಕೋಟಿ ಚುನಾವಣೆ ಘೋಷಣೆ ನಂತರ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಿ ತಪಾಸಣೆ ನಡೆಸಿ ಅಕ್ರಮವಾಗಿ ಅಥವಾ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ವಸ್ತುಗಳನ್ನು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ಒಟ್ಟು 230 ಕೋಟಿ ಮೌಲ್ಯದ ವಸ್ತಗಳನ್ನು ಹಾಗೂ 105 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.

     ಸೋಮವಾರ ಮತ್ತು ಮಂಗಳವಾರ ಸಹ ಹಣ ಸಾಗಾಟದ ಬಗ್ಗೆ ನಿಗಾ ಇಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈವರೆಗೆ 53,406 ವ್ಯಕ್ತಿಗಳ ವಿರುದ್ಧ ಬಾಂಡ್ ಓವರ್ ಮಾಡಲಾಗಿದೆ. ಭದ್ರತಾ ಪ್ರಕರಣ ಉಲ್ಲಂಘಿಸಿದ 115 ಪ್ರಕರಣ ದಾಖಲಿಸಲಾಗಿದೆ. 714 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap