ಕೊರಟಗೆರೆ :-
ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಿ ಪುತ್ರ ಅವರಿಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ನಿರಂತರ 36 ವರ್ಷಗಳು ಸಕ್ರಿಯವಾಗಿ ತೊಡಗಿಸಿಕೊಂಡು ಗಣನೀಯ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ತಾಲೂಕ ಆಡಳಿತದಿಂದ 77ನೇ ಗಣರಾಜ್ಯೋತ್ಸವ ಆಚರಣೆಯ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಲಕ್ಷ್ಮಿಪುತ್ರರವರು ಬುಕ್ಕಾಪಟ್ಟಣ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರಾಗಿ, ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿ, ಜಿಲ್ಲಾ ಸರ್ಕಾರಿ ನೌಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಕನ್ನಡ ಸಾಹಿತ್ಯ ಪರಿಷತ್, ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ವೇದಿಕೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ತಾಲೂಕ್ ಆಡಳಿತ ಗುರುತಿಸಿ 77 ನೇ ಗಣರಾಜ್ಯೋತ್ಸವ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು .
ಈ ಸಂದರ್ಭದಲ್ಲಿ ತಹಶಿಲ್ದಾರ್ ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು, ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಫೈರೋಜ್ ಬೇಗಂ, ಕಂದಾಯ ತನಿಖಾಧಿಕಾರಿ ಬಸವರಾಜು ತಿಮ್ಮಾಪುರ, ನಾಗರಾಜು ಹಾಗೂ ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.








