ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರು ಸಾವು

ವಿಜಯಪುರ

     ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ NH-50 ರಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

      ಅಪಘಾತದಲ್ಲಿ ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ರಾಜು ಕಾಂಬಳೆ, ಪೋಳ ಎಂಬವರು ಗಾಯಗೊಂಡಿದ್ದಾರೆ. ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಅಪಘಾತ ಸಂಭವಿಸಿದೆ.

Recent Articles

spot_img

Related Stories

Share via
Copy link