ಪ್ಯಾಲೆಸ್ಟಿನ್ ಭಯೋತ್ಪಾದಕರ ದಾಳಿ; ನಾಲ್ವರು ಸಾವು….!

ಜೆರುಸಲೇಂ:

    ಇಸ್ರೇಲ್‌ ರಾಜಧಾನಿ ಜೆರುಸಲೇಂನಲ್ಲಿ  ನಡೆದ ಪ್ಯಾಲೆಸ್ಟಿನ್ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಕನಿಷ್ಠ 4 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಜೆರುಸಲೇಂ ನಗರದ ಹೊರವಲಯದ ರಾಮೋತ್‌ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಜನಸಂದಣಿಯ ಬಸ್‌ ಸ್ಟಾಪ್‌ ಮೇಲೆ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ . ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ದಾಳಿ ನಡೆಸಿದ ಇಬ್ಬರನ್ನೂ ಹೊಡೆದುರುಳಿಸಲಾಗಿದೆ.

   ಇಸ್ರೇಲ್‌ನ ರಾಷ್ಟ್ರೀಯ ತುರ್ತು ವೈದ್ಯಕೀಯ ಸೇವೆ ಮ್ಯಾಗೆನ್ ಡೇವಿಡ್ ಅಡೋಮ್ ಪ್ರಕಾರ, ಘಟನೆ ಸ್ಥಳದಲ್ಲಿ ಹಲವು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. “ನಾವು ಆಗಮಿಸಿದಾಗ, ಸಂತ್ರಸ್ತರು ರಸ್ತೆ ಮತ್ತು ಪಾದಚಾರಿ ಮಾರ್ಗದಲ್ಲಿ ಬಿದ್ದಿರುವುದು ಕಂಡುಬಂತು. ಈ ವೇಳೆ ಕೆಲವರು ಪ್ರಜ್ಞಾಶೂನ್ಯರಾಗಿದ್ದರುʼʼ ಎಂದು ಜೆರುಸಲೆಮ್ ಪೋಸ್ಟ್ ಉಲ್ಲೇಖಿಸಿ ಎಂಡಿಎ ಪ್ಯಾರಾಮೆಡಿಕ್‌ನ ನಾದವ್ ತೈಬ್ ಹೇಳಿದ್ದಾರೆ. “ನಾವು ಸ್ಥಳದಲ್ಲೇ ಚಿಕಿತ್ಸೆ ನೀಡಲು ಪ್ರಾರಂಭಿಸಿದ್ದೇವೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದೇವೆʼʼ ಎಂದು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Recent Articles

spot_img

Related Stories

Share via
Copy link