ಮೈಸೂರು:
ಬರಗಾಲದ ನಡುವೆಯೂ ವಿಶ್ವವಿಖ್ಯಾತ ಮೈಸೂರು ದಸರಾ-2023 ನಡೆಯುತ್ತಿದೆ. ಈ ದಸರಾ ಪೂಜಾ ಕೈಂಕರ್ಯಗಳ ಹಿನ್ನಲೆಯಲ್ಲಿ ಮೈಸೂರಿನ ಅರಮನೆ ಪ್ರವೇಶಕ್ಕೆ ಕೆಲ ದಿನಗಳಂದು ಸಾರ್ವಜನಿಕರಿಗೆ ನಿರ್ಬಂಧವನ್ನು ವಿಧಿಸಲಾಗಿದೆ.
ಹೌದು ದಸರಾ ಪೂಜಾ ಕೈಂಕರ್ಯದ ನಿಮಿತ್ತ ಅಕ್ಟೋಬರ್ 9, 15, 23 ಹಾಗೂ 24ರಂದು ಸಾರ್ವಜನಿಕರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಅಕ್ಟೋಬರ್.9ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡನೆ ಕಾರ್ಯ ನಡೆಯಲಿದೆ. ಅಕ್ಟೋಬರ್.15ರ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವೆರೆಗೆ ಖಾಸಗಿ ದರ್ಬಾರ್ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರು ಪೂಜಾ ಕೈಂಕರ್ಯ ನೆರವೇರಿಸಲಿದ್ದಾರೆ. ಅಕ್ಟೋಬರ್.23ರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಯುಧ ಪೂಜೆ ಪ್ರಯುಕ್ತ ಹಾಗೂ ಅ.24ರ ವಿಜಯದಶಮಿ ಪ್ರಯುಕ್ತ ಪೂರ್ಣ ದಿನ ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.
ನವೆಂಬರ್.8ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ವಿಸರ್ಜನೆ ಪ್ರಯುಕ್ತ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿಷೇಧಿಸಲಾಗಿದೆ. ಹೀಗಾಗಿ ಈ ದಿನಾಂಕಗಳಂದು ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.