ಹುಬ್ಬಳ್ಳಿ
ನಾಡಿನ ದೊಡ್ಡ ಹಬ್ಬಗಳಲ್ಲಿ ಒಂದಾದ ಬೆಳಕಿನ ಹಬ್ಬ ದೀಪಾವಳಿಗೆ ನಗರ ಪ್ರದೇಶಗಳಿಂದ ತಮ್ಮ ಊರುಗಳಿಗೆ ಪ್ರಯಾಣಿಕರ ದಂಡೇ ಹರಿದುಬರುತ್ತದೆ. ಆದ್ದರಿಂದ ಪ್ರಯಾಣಿಕರ ದಟ್ಟಣೆಯನ್ನು ತಡೆಯಲು ನೈರುತ್ಯ ರೈಲ್ವೆಯು ವಿಶೇಷ ಎಕ್ಸ್‌ಪ್ರೆಸ್ ರೈಲು ಬಿಡಲು ನಿರ್ಧಾರ ಮಾಡಿದೆ.
ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ನೈರುತ್ಯ ರೈಲ್ವೆ ವಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.
1. ರೈಲು ಸಂಖ್ಯೆ 06231:
ಎಸ್‌ಎಂವಿಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10:55 ಕ್ಕೆ ವಿಜಯಪುರ ತಲುಪಲಿದೆ.
2. ರೈಲು ಸಂಖ್ಯೆ 06232:
ವಿಜಯಪುರ-ಎಸ್‌ಎಂವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 9:30ಕ್ಕೆ ಎಸ್‌ಎಂವಿಟಿಗೆ ಆಗಮಿಸುತ್ತದೆ.
3. ರೈಲು ಸಂಖ್ಯೆ 06585:
ಎಸ್‌ಎಂವಿಟಿ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು ರಾತ್ರಿ 8 ಗಂಟೆಗೆ ಎಸ್ಎಂವಿಟಿಯಿಂದ ಹೊರಟು ಮರುದಿನ ಬೆಳಗ್ಗೆ 8 ಗಂಟೆಗೆ ಬೆಳಗಾವಿಗೆ ಆಗಮಿಸುತ್ತದೆ.
4. ರೈಲು ಸಂಖ್ಯೆ 06586:
ಬೆಳಗಾವಿ-ಎಸ್‌ಎಂವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14ರಂದು ಸಂಜೆ 6:50ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 6 ಗಂಟೆಗೆ ಎಸ್‌ಎಂವಿಟಿಗೆ ಆಗಮಿಸುತ್ತದೆ.
ಈ ಮೇಲೆ ತಿಳಿಸಿದ ಪ್ರತಿಯೊಂದು ರೈಲುಗಳು 16 ಕೋಚ್‌ಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಒಂದು ಎಸಿ ಟು-ಟೈರ್, ಮೂರು ಎಸಿ ತ್ರೀ-ಟೈರ್, ಎಂಟು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ಸೆಕೆಂಡ್ ಕ್ಲಾಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್-ವ್ಯಾನ್‌ಗಳು/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ಗಳು ವ್ಯವಸ್ಥೆ ಸಹ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ