ಬೆಂಗಳೂರು:
ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಿಂತಿದ್ದ 4 ಬೈಕ್ಗಳಿಗೆ ಬೆಂಕಿ ತಗುಲಿ ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.