ಬೆಂಗಳೂರು:
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷದ ಅಂಗವಾಗಿ ದಾವಣಗೆರೆಯ ಗಾಜಿನ ಮನೆಯಲ್ಲಿ ಇಂದಿನಿಂದ 4 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ಲಕ್ಷ ಗುಲಾಬಿ ಮತ್ತು ಸೇವಂತಿಗೆ ಹೂವುಗಳಿಂದ ಅರಳಿರುವ ಚಂದ್ರಯಾನ-3 ರ ಮಾದರಿ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದೆ. ಇದರೊಂದಿಗೆ 50 ಸಾವಿರ ಹೂವುಗಳಿಂದ ನಿರ್ಮಾಣವಾಗಿರುವ ಕರ್ನಾಟಕದ ಭೂಪಟ, ನಾಡಿನ ಸಾಹಿತ್ಯ, ಕಲೆ, ಸಾಂಸ್ಕöÈತಿಕ ರಾಯಭಾರಿಗಳನ್ನು ಕಾಣಬಹುದಾಗಿದೆ ಎಂದರು.
ಇಂದು ಸಂಜೆ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, ಪ್ರದರ್ಶನ ಇದೇ 16 ರವರೆಗೆ ನಡೆಯಲಿದೆ ಎಂದು ರಾಘವೇಂದ್ರ ಪ್ರಸಾದ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ