ಉತ್ತರಾಖಂಡ ಹಿಂಸಾಚಾರ: 4 ಸಾವು….!

ಹಲ್ದ್ವಾನಿ:

     ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

    ಗುರುವಾರ ಮದರಸಾವನ್ನು ಕೆಡವಿದ ನಂತರ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಗಲಭೆಕೋರರ ವಿರುದ್ಧ ಶೂಟ್-ಆಟ್-ಸೈಟ್ ಆದೇಶ ಹೊರಡಿಸಲಾಗಿದೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ.

    ಅಧಿಕಾರಿಗಳ ಪ್ರಕಾರ, ನೈನಿತಾಲ್ ಜಿಲ್ಲಾಡಳಿತ ಮತ್ತು ಸ್ಥಳೀಯ ನಗರ ಪಾಲಿಕೆ ಅಧಿಕಾರಿಗಳ ಜಂಟಿ ತಂಡವು ನಜುಲ್ ಭೂಮಿಯಲ್ಲಿದ್ದ ಮದರಸಾವನ್ನು ನೆಲಸಮ ಮಾಡಿದೆ. ಇದರಿಂದ ಕೋಪಗೊಂಡ ಸ್ಥಳೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ವೇಗವಾಗಿ ಹದಗೆಟ್ಟಿದ್ದು ಸ್ಥಳೀಯರು ನಡೆಸಿದ ಕಲ್ಲು ತೂರಾಟದಲ್ಲಿ 50ಕ್ಕೂ ಹೆಚ್ಚು ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಗಾಯಗೊಂಡಿದ್ದಾರೆ.

     ಪೊಲೀಸ್ ಠಾಣೆಯ ಹೊರಗೆ ಇದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಹಿಂಸಾಚಾರ ಮತ್ತಷ್ಟು ಉಲ್ಬಣಗೊಂಡಿದ್ದು, ಕಾನೂನು ಸುವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap