ಕಾರಗೆ ಲಾರಿ ಡಿಕ್ಕಿ : 4 ಸಾವು ….!

ಧನ್‌ಬಾದ್‌:

   ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ನೇಹಿತರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

   ಕಾರಿನಲ್ಲಿ ಐವರು ಸೇಹ್ನಿತರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಲೋಹರ್‌ಬರ್ವಾದ ಆರು ಪಥದ ರಾಷ್ಟ್ರೀಯ ಹೆದ್ದಾರಿ-2 ರಲ್ಲಿ ಕಾರು, ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಮುಖಮುಖಿಯಾಗಿ ಡಿಕ್ಕಿ ಹೊಡೆದಿದೆ.

   ಗಂಭೀರವಾಗಿ ಗಾಯಗೊಂಡಿದ್ದ ಓರ್ವರನ್ನು ಸಮೀಪದ ಆಸ್ಪತ್ರಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯ ನಂತರ ಟ್ರಕ್ ಚಾಲಕ ತನ್ನ ವಾಹನದೊಂದಿಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link