ಬೆಂಗಳೂರು, ಬೆಳಗಾವಿಯಲ್ಲಿ ಭೀಕರ ಅಪಘಾತ; ನಾಲ್ವರು ಸಾವು

ಬೆಳಗಾವಿ :

    ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

    ಕುಣಿಗಲ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಈ ಅಪಘಾತಕ್ಕೆ ಕಾರಣನಾಗಿದ್ದಾನೆ ಎಂದು ಹೇಳಲಾಗಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link