ದೆಹಲಿ ಚಲೋ ಪ್ರತಿಭಟನೆ : ಮೃತರ ಸಂಖ್ಯೆ 4ಕ್ಕೆ ಏರಿಕೆ

ಚಂಡೀಗಢ:

   ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ದೆಹಲಿ ಚಲೋ ಪ್ರತಿಭಟನೆ ವೇಳೆ ಖಾನೌರಿ ಗಡಿಯಲ್ಲಿ ಮತ್ತೋರ್ವ ಪ್ರತಿಭಟನಾನಿರತ ರೈತ ಸಾವಿಗೀಡಾಗಿದ್ದು, ಮೃತ ರೈತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಶುಕ್ರವಾರ ತಿಳಿಸಿದ್ದಾರೆ. 

   ದರ್ಶನ್ ಸಿಂಗ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ. 

    ‘ಮೃತರು ಖಾನೌರಿ ಗಡಿಯಲ್ಲಿದ್ದರು ಮತ್ತು ಸದ್ಯ ನಡೆಯುತ್ತಿರುವ ರೈತರ ಪ್ರತಿಭಟನೆ ವೇಳೆ ಸಾವಿಗೀಡಾದ ನಾಲ್ಕನೇ ರೈತರಾಗಿದ್ದಾರೆ. ಮೃತರನ್ನು ದರ್ಶನ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ’ ಎಂದು ಹೇಳಿದರು.

   ‘ಸಂತ್ರಸ್ತ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು. ಈ ಹಿಂದಿನ ಮೂವರು ಹುತಾತ್ಮರಿಗೆ ನೀಡಿದ ಪರಿಹಾರದಂತೆಯೇ ಇವರಿಗೂ ಸೂಕ್ತ ಪರಿಹಾರ ನೀಡಬೇಕು ಮತ್ತು ಅವರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು. ಅವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರವನ್ನು ಒದಗಿಸಲಾಗಿದೆ’ ಎಂದು ಅವರು ಹೇಳಿದರು

   ಬುಧವಾರ ಮುಂಜಾನೆ, ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಕತ್ತಿನ ಹಿಂಭಾಗಕ್ಕೆ ಗಾಯವಾಗಿ ಶುಭಕರನ್ ಸಿಂಗ್ ಎಂಬುವವರು ಸಾವಿಗೀಡಾಗಿದ್ದರು. ಇದರಿಂದ ರೈತ ಮುಖಂಡರು ಕೇಂದ್ರದೊಂದಿಗಿನ ಮಾತುಕತೆಯನ್ನು ಸ್ಥಗಿತಗೊಳಿಸಿದರು.

   ಶುಭಕರನ್ ನಿಧನದ ಹಿನ್ನೆಲೆಯಲ್ಲಿ ರೈತರು ಇಂದು ಕರಾಳ ಶುಕ್ರವಾರವನ್ನು ಆಚರಿಸಿದರು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಕೃಷಿ ಸಾಲಮನ್ನಾ ಸೇರಿದಂತೆ ತಮ್ಮ ಇತರೆ ಬೇಡಿಕೆಗಳನ್ನು ಈಡೇರಿಸಲು ಕೇಂದ್ರವನ್ನು ಒತ್ತಾಯಿಸಲು, ರೈತರು ತಮ್ಮ ಟ್ರ್ಯಾಕ್ಟರ್, ಮಿನಿ-ವ್ಯಾನ್‌ಗಳು ಮತ್ತು ಪಿಕಪ್ ಟ್ರಕ್‌ಗಳೊಂದಿಗೆ ಫೆಬ್ರುವರಿ 13 ರಿಂದ ಗಡಿ ಭಾಗಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap