ಸಂಭಾಲ್:
ಅಕ್ರಮ ಪಟಾಕಿ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಅವರು ಸರಾಯ್ ಪ್ರದೇಶದ ಸಬೀರ್ ಅಲಿ ಅವರ ಪಟಾಕಿ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟದಿಂದಾಗಿ ಮೂವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರ ಗುನ್ನೌರ್‌ನ ಪ್ರಭಾರಿ ಹೇಳಿದ್ದಾರೆ.
ಅಲಿ ಎಂಬಾತ ಅನುಮತಿ ಪಡೆದ ಸ್ಥಳವನ್ನು ಹೊರತುಪಡಿಸಿ ವಸತಿ ಪ್ರದೇಶದಲ್ಲಿ ಪಟಾಕಿಗಳನ್ನು ಸಂಗ್ರಹಿಸಿದ್ದಾರೆ ಎಂದು ಎಸ್ಪಿ ಚಕ್ರೇಶ್ ಮಿಶ್ರಾ ಹೇಳಿದ್ದಾರೆ.
ಘಟನೆ ನಂತರ ಅಲಿಯನ್ನು ಬಂಧಿಸಲಾಗಿದೆ. ಬೆಂಕಿಯನ್ನು ನಂದಿಸಲಾಗಿದೆ ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಮಿಶ್ರಾ ಹೇಳಿದರು.