ಮೇದಿನಗರ:
ನಾಲ್ಕನೇ ಹಂತದ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 190 ಕಿ.ಮೀ ದೂರದಲ್ಲಿರುವ ಮನಾಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸ್ಕ್ರ್ಯಾಪ್ ಡೀಲರ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾರ್ಖಂಡ್‌ನ ಪಲಮು ಸೇರಿದಂತೆ ನಾಲ್ಕು ಸ್ಥಾನಗಳಿಗೆ ಲೋಕಸಭೆ ಚುನಾವಣೆಗೆ ಮತದಾನ ನಡೆಯುವ ಮುನ್ನಾ ದಿನ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ ಎಂದು ಪಲಮು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರೀಷ್ಮಾ ರಮೇಶನ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಬಾಂಬ್ ಸ್ಫೋಟದ ಸಾಧ್ಯತೆ ಸೇರಿದಂತೆ ಎಲ್ಲ ದೃಷ್ಟಿಕೋನಗಳಿಂದ ನಾವು ಘಟನೆಯನ್ನು ತನಿಖೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.