ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ :42 ಜನರ ಸ್ಥಳಾಂತರ

ಮಂಗಳೂರು:

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಪೀಡಿತ ಪ್ರದೇಶಗಳಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

    ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲಾಗಿದ್ದು, ಭೂಕುಸಿತಕ್ಕೆ ಗುರಿಯಾಗಿರುವ ಮಂಗಳೂರು ಸಮೀಪದ ಪಂಜಿಮಗರು ಎಂಬಲ್ಲಿ ಮತ್ತೊಂದು ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ.

    ಭಾರೀ ಮಳೆಯಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುವ ಸುಬ್ರಹ್ಮಣ್ಯ ಪ್ರದೇಶದಲ್ಲಿ 8 ಮಹಿಳೆಯರು ಸೇರಿದಂತೆ 19 ಮಂದಿಯನ್ನು ಸ್ಥಳಾಂತರ ಮಾಡಲಾಗಿದ್ದು, ಅವರನ್ನು ದೇವಸ್ಥಾನದ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಮಧ್ಯೆ, ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಪಂಜಿಮೊಗರು ವಾರ್ಡ್ ಸಂಖ್ಯೆ 12ರಲ್ಲಿ 23 ಸದಸ್ಯರ ಐದು ಕುಟುಂಬಗಳನ್ನು ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿ ಸಾಮಾನ್ಯವಾಗುವವರೆಗೆ ಅವರಿಗೆ ಪರಿಹಾರ ಕೇಂದ್ರದಲ್ಲಿ ಆಹಾರ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಪಶುಸಂಗೋಪನಾ ಇಲಾಖೆಯು ಸಾಕುಪ್ರಾಣಿಗಳಿಗೆ ಪ್ರತ್ಯೇಕ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಈ ನಡುವೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಳ್ಳಾಲ ಮತ್ತು ಸೋಮೇಶ್ವರಕ್ಕೆ ಭಾನುವಾರ ಭೇಟಿ ನೀಡಿದ್ದು, ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಬಳಿಕ ಉಳ್ಳಾಲ ಸಮೀಪದ ಕುತ್ತಾರ್‌ನ ಮದನಿ ನಗರದಲ್ಲಿ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ವೇಳೆ ಮೃತರ ಕುಟುಂಬಕ್ಕೆ ಶೀಘ್ರವೇ ಪರಿಹಾರ ನೀಡಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link