ರಜೌರಿ ENCOUNTER :4 ಯೋಧರು ಹುತಾತ್ಮ

ಶ್ರೀಗರ:

     ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲಕ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

    ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ನಿನ್ನೆ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು.

     ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಈ ನಡುವೆ ಅಡಗಿ ಕುಳಿತಿರುವ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

      ಹುತಾತ್ಮರ ಪೈಕಿ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಪ್ರಾಂಜಲ್ ಅವರು ಮಂಗಳೂರು ಎಂಆರ್’ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಅವರ ಏಕೈಕ ಪುತ್ರ. 

    ಮೂಲತಃ ಅವಿಭಜಿತ ದಕ್ಷಿಣ ಕನ್ನಡದವರಾಗಿದ್ದ ವೆಂಕಟೇಶ್ ಅವರು ಮೇ.31ರಂದು ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ  ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು,. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

    ಈ ನಡುವೆ ರಜೌರಿಯಲ್ಲಿ ಸ್ಥಳೀಯರಿಗೆ ಮನೆ ಬಿಟ್ಟು ಹೊರಗೆ ಬರದಂತೆ ಸೂಚಿಸಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link