ನವದೆಹಲಿ:
ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಪ್ರೇಮಿಗಳ ದಿನವೆಂದು ಆಚರಿಸುವ ಫೆಬ್ರವರಿ 14 , ಭಾರತೀಯರ ಪಾಲಿಗೆ ಎಂದೂ ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು.
ಪುಲ್ವಾಮಾದಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ನಡೆದ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು.ಇಲ್ಲಿಗೆ ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು ಇದು ಉಗ್ರವಾದಿಗಳ ಕೃತ್ಯವೂ ಹೌದು.
ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಮಾರ್ಧದಲ್ಲಿ ಜೀವವನ್ನು ಬಲಿಕೊಟ್ಟರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಗೆ ಅತ್ಯಂತ ಭೀಕರವಾಗಿ ದಾಳಿ ನಡೆಸಲಾಗಿತ್ತು. ಫೆಬ್ರವರಿ 14, 2019 ರಂದು ಮಧ್ಯಾಹ್ನ ಹೊತ್ತಿಗೆ ಈ ಭೀಕರ ದಾಳಿ ನಡೆದಿತ್ತು. (Pulwama attack)
14 ಫೆಬ್ರವರಿ 2019
ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್ ಇ ಮೊಹಮ್ಮದ್ ಸಂಘಟನೆ ವಿಡಿಯೋವನ್ನು ಬಿಡುಗಡೆ ಮಾಡಿತು, ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ