5 ದಿನ ಭಾರಿ ಮಳೆ ಸಾಧ್ಯತೆ ….!

ಬೆಂಗಳೂರು:

  ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

     ಸಹಜವಾಗಿ ಜುಲೈ 8ರ ವೇಳೆಗೆ ಮುಂಗಾರು ಇಡೀ ದೇಶವನ್ನು ವ್ಯಾಪಿಸಬೇಕಿತ್ತು. ಆರು ದಿನಗಳಿಗೂ ಮುಂಚಿತವಾಗಿಯೇ ಭಾನುವಾರದಂದು ಇಡೀ ದೇಶವನ್ನು ಆವರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜಸ್ತಾನ, ಪಂಜಾಬ್‌ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಉತ್ತರ ಪ್ರದೇಶದ ಪೂರ್ವ ಮತ್ತು ಬಿಹಾರದ ದಕ್ಷಿಣ ಭಾಗವನ್ನು ಹೊರತುಪಡಿಸಿ ಮುಂಗಾರು ಸಾಮಾನ್ಯವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

     ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ IMD ವಿಜ್ಞಾನಿ ಡಾ. ನರೇಶ್ ಕುಮಾರ್ ಅವರು, ‘ನೈಋತ್ಯ ಮಾನ್ಸೂನ್ ಇಂದು ಇಡೀ ದೇಶವನ್ನು ಆವರಿಸಿದ್ದು, ಸಾಮಾನ್ಯವಾಗಿ ಜುಲೈ 8ರಂದು ಈ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಸರಾಸರಿ ದಿನಾಂಕಕ್ಕಿಂತ ಮೊದಲೇ ದೇಶಾದ್ಯಂತ ಮುಂಗಾರು ಆವರಿಸಿದೆ. ಈಶಾನ್ಯ ರಾಜ್ಯಗಳಲ್ಲಿ ಮಾನ್ಸೂನ್ ವಿಶೇಷವಾಗಿ ಸಕ್ರಿಯವಾಗಿದ್ದು, ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅವರು ಹೇಳಿದರು.

    ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ ಹದಗೆಟ್ಟಿದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಭಾನುವಾರ ಚರ್ಚೆ ನಡೆಸಿದ್ದು, ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಜನರೊಂದಿಗೆ ನಿಂತಿವೆ ಎಂದು ಶಾ ಭರವಸೆ ನೀಡಿದರು. ಭಾರೀ ಮಳೆಯಿಂದ ಗುಜರಾತ್‌ನ ಹಲವು ಭಾಗಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ವಾಯುವ್ಯ ಉತ್ತರ ಪ್ರದೇಶ ಮತ್ತು ಅದರ ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆ ಇದೆ. ಮತ್ತೊಂದು ಚಂಡಮಾರುತದ ಪರಿಚಲನೆಯು ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಪಕ್ಕದಲ್ಲಿದೆ. ಉತ್ತರಾಖಂಡ, ಬಿಹಾರ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳು ಮತ್ತು ಗುಜರಾತ್‌ನಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap