ಹಾಸನ
ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು ಅದರಲ್ಲೂ ವಿದ್ಯಾಭ್ಯಾಸಕ್ಕಾಗಿ ವಸತಿ ಶಾಲೆಗಳಿಗೆ ಬರುವ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಹಾಸನದ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಐವರನ್ನು ಹಾಸನ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಗಳಾದ ಪುನಿತ್ (28), ಶಿಕ್ಷಕ ಶಿವಯ್ಯ (32), ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ (30), ಶಿಕ್ಷಕ ವಿಜಯಕುಮಾರ (39) ಎಂದು ಗುರುತಿಸಲಾಗಿದೆ.
