HSRP ಅಳವಡಿಕೆ :5 ದಿನ ಮಾತ್ರ ಬಾಕಿ

ಬೆಂಗಳೂರು :

    ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ   ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

   ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.

   ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ.ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ

• https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
• ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ.
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
• HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
• ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
• ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

 • https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ
ಕಾಯ್ದಿರಿಸಿಕೊಳ್ಳಿ.
• ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ | ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

• HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. · ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

    ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

   ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap