ಹಿರಿಯೂರು:
ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್ – ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45) , ಮಸ್ಕಿಯ ರಮೇಶ್(40), ರಾಯಚೂರಿನ ಮಾಬಮ್ಮ ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರ ಗುರುತು ಪತ್ತೆಯಾಗಿಲ್ಲ. ಬಸ್ ನಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಅವರೆಲ್ಲರನ್ನೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಿರಿಯೂರು ತಾಲೂಕಿಗೆ ಸೇರಿದ ಗೊಲ್ಲಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.
