ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಬಸ್‌ :5 ಸಾವು

ಜಾಜ್ಪುರ್:

    ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಐವರು ಪ್ರಯಾಣಿಕರು  ಸಾವನ್ನಪ್ಪಿ 40ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ಸಂಭವಿಸಿದೆ.

   ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ಸೋಮವಾರ ಈ ಭಾರೀ ಅವಘಡ ಸಂಭವಿಸಿದ್ದು, ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ತೆರಳುತ್ತಿದ್ದ ಈ ಬಸ್ ಸೋಮವಾರ ಸಂಜೆ ಒಡಿಶಾದ ಜಾಜ್‌ಪುರ ಜಿಲ್ಲೆಯ ಮೇಲ್ಸೇತುವೆಯಿಂದ ಬಿದ್ದಿದೆ. ಅಪಘಾತದಲ್ಲಿ ಮಹಿಳೆ ಸೇರಿದಂತೆ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದಲ್ಲದೆ, 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

   ಸದ್ಯ ಗಂಭೀರ ಗಾಯಗೊಂಡಿರುವ ಗಾಯಾಳುಗಳನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳು ಅನೇಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಲ್ಲದೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ.

   ಪೊಲೀಸ್ ಅಧಿಕಾರಿಗಳಿಂದ ಬಂದ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿ-16 ರ ಬಾರಾಬತಿ ಸೇತುವೆಯ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ 50 ಪ್ರಯಾಣಿಕರನ್ನು ಹೊತ್ತ ಬಸ್ ಪುರಿಯಿಂದ ಕೋಲ್ಕತ್ತಾಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಧರ್ಮಶಾಲಾ ಪೊಲೀಸ್ ಠಾಣೆ ಪ್ರಭಾರಿ ಇನ್ಸ್‌ಪೆಕ್ಟರ್ ತಪನ್ ಕುಮಾರ್ ನಾಯಕ್ ತಿಳಿಸಿದ್ದಾರೆ. ಸುಮಾರು 40 ಮಂದಿ ಗಾಯಗೊಂಡಿದ್ದು, ಅವರಲ್ಲಿ 30 ಮಂದಿಯನ್ನು ಕಟಕ್ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

   ಮಹಿಳೆ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಸುಮಾರು 50 ಪ್ರಯಾಣಿಕರು ಬಸ್‌ನಲ್ಲಿ ಕುಳಿತಿದ್ದರು. ಈ ಬಸ್ ಒಡಿಶಾದ ಪುರಿಯಿಂದ ಕೋಲ್ಕತ್ತಾ ಕಡೆಗೆ ಹೋಗುತ್ತಿತ್ತು. ಈ ವೇಳೆ ಒಡಿಶಾದ ಜಾಜ್‌ಪುರ ತಲುಪಿತ್ತು. ಅಲ್ಲಿ ಮೇಲ್ಸೇತುವೆಯಿಂದ ಬಿದ್ದು ಅಪಘಾತ ಸಂಭವಿಸಿದೆ. ಈ ಘಟನೆ ಆ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಜನರು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಒಳಗಿನಿಂದ ಗಾಯಾಳುಗಳನ್ನು ರಕ್ಷಿಸುವ ಪ್ರಯತ್ನ ಆರಂಭವಾಯಿತು. ಅಪಘಾತದಲ್ಲಿ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.

   ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಠಾಣೆ ಪ್ರಭಾರಿ ತಿಳಿಸಿದ್ದಾರೆ. ಈ ಅಪಘಾತದ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap