ರಾಮನಗರ: ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ದುರ್ಮರಣ

ರಾಮನಗರ

    ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ವ್ಯಕ್ತಿಗಳು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ದುರಂತ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

   ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕುಣಿಗಲ್​ನಿಂದ ಬೆಂಗಳೂರು ಕಡೆ ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರಿನ ಏರ್​ಬ್ಯಾಗ್ ಓಪನ್ ಆದರೂ ಕಾರಿನಲ್ಲಿದ್ದ ನಾಯಿ ಮರಿ ಹೊರತುಪಡಿಸಿ ಉಳಿದವರೆಲ್ಲರೂ ಸಾವನ್ನಪ್ಪಿದ್ದಾರೆ.ಗಾಯಗೊಂಡಿರುವ ನಾಯಿ ಮರಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap