ಮೊದಲ ಸಂಪುಟ ಸಭೆಯಲ್ಲೇ 5 ಗ್ಯಾರಂಟಿಗಳು ಜಾರಿ : ಮುಖ್ಯಮಂತ್ರಿ

ಬೆಂಗಳೂರು:

    ನಾವು ನುಡಿದಂತೆ ನಡೆಯುತ್ತೇವೆ ನಾವು ಯಾರಿಗೂ ಮೋಸ ಮಾಡುವುದಿಲ್ಲ  ಇಂದು ನಡೆಯುವ ಮೊದಲ ಸಂಪುಟ ಸಭೆಯಲ್ಲೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.  

     ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರು ಮಾತನಾಡಿದರು.

      ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ಅನೇಕರು ರಾಜ್ಯದಲ್ಲಿ ಪ್ರಚಾರ ಮಾಡಿದ್ದರು. ಕಾಂಗ್ರೆಸ್​ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ. ಸಾಹಿತಿಗಳು, ಚಿಂತಕರು, ಸಂಘಟನೆಗಳಿಗೂ ಧನ್ಯವಾದ ಹೇಳುತ್ತೇನೆಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap