ಕರ್ನಾಟಕ ಸಂಭ್ರಮ-50 : ಹಾಡಲೇಬೇಕಾದ 5 ಹಾಡುಗಳು

ಬೆಂಗಳೂರು :

     ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ಅಂಗವಾಗಿ ಸರ್ಕಾರ ಆಯ್ಕೆಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಹಾಡುಗಳನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ‌ ಪಂಚಾಯತಿ ಮಟ್ಟದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ಗೀತ ಗಾಯನದ ನಮನ ಸಲ್ಲಿಸಬೇಕೆಂದು ಸೂಚನೆ ನೀಡಲಾಗಿದೆ.

     ಕರ್ನಾಟಕ-50 ಸಂಭ್ರಮ ಹಿನ್ನೆಲೆಯಲ್ಲಿ 2023 ನವೆಂಬರ್ 1 ರಿಂದ 2024ರ‌ ನವೆಂಬರ್ 1ರ ವರೆಗೆ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದರ‌ ಭಾಗವಾಗಿ ನವೆಂಬರ್ 1 ರಂದು ರಾಜ್ಯದೆಲ್ಲೆಡೆ ಆಚರಿಸುವ ರಾಜೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ರಾಷ್ಟ್ರ ಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ 5 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕೆಂದು ಸರ್ಕಾರ ಆದೇಶಿಸಿದೆ.

    ಎಲ್ಲಾ ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳು, ಸರ್ಕಾರಿ, ಅರೆ-ಸರ್ಕಾರಿ, ನಿಗಮ ಮಂಡಳಿಗಳ ಕಚೇರಿಗಳು, ಬ್ಯಾಂಕ್‌ಗಳು ಹಾಗೂ ಸಂಘ ಸಂಸ್ಥೆಗಳು ನವೆಂಬರ್ 1 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಕನ್ನಡ ಹಾಡುಗಳನ್ನು ಹಾಡುವ ಮೂಲಕ ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸಬೇಕೆಂದು ತಿಳಿಸಲಾಗಿದೆ.

     ಹುಯಿಲಗೋಳ ನಾರಾಯಣರಾಯರ “ಉದಯವಾಗಲಿ‌ ನಮ್ಮ ಚೆಲುವ ಕನ್ನಡ ನಾಡು”, ಕುವೆಂಪು ಅವರ “ಎಲ್ಲಾದರು ಇರು ಎಂತಾದರು ಇರು”, ದ.ರಾ.ಬೇಂದ್ರೆ ಅವರ “ಒಂದೇ ಒಂದೇ ಕರ್ನಾಟಕವೊಂದೇ”, ಸಿದ್ದಯ್ಯ ಪುರಾಣಿಕ ಅವರ “ಹೊತ್ತಿತ್ತೋ ಹೊತ್ತಿತ್ತು ಕನ್ನಡದ ದೀಪ” ಹಾಗೂ ಚನ್ನವೀರ ಕಣವಿ ಅವರ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ”.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap