ಶ್ರೀನಗರ:
ಇಲ್ಲಿನ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಸಿಡಿಸಿದ ಪರಿಣಾಮ ಘಟನೆಯಲ್ಲಿ ನಾಗರಿಕರೊಬ್ಬರು ಸಾವನ್ನಪ್ಪಿ 15 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
#UPDATE Jammu and Kashmir: 15 people injured in a grenade attack in a market on Maulana Azad Road in Srinagar. https://t.co/LYAa5UHght pic.twitter.com/ic4LuXq8g4
— ANI (@ANI) November 4, 2019
ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್ ಮಾರುಕಟ್ಟೆ ಪ್ರದೇಶದಲ್ಲಿ ಇಂದು 1: 20ರ ಸುಮಾರಿಗೆ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಘಟನೆ ನಡೆದ ಸ್ಥಳದಲ್ಲಿ ಜಮಾಯಿಸಿದ್ದು, ಕೃತ್ಯ ಎಸಗಿದವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಕಳೆದ 15 ದಿನಗಳಲ್ಲಿ ಇದು ಎರಡನೇ ದಾಳಿಯಾಗಿದೆ. ಅಕ್ಟೋಬರ್ 26ರಂದು ಶ್ರೀನಗರದ ಕರಣ್ನಗರದಲ್ಲಿ ನಡೆದ ಗ್ರನೇಡ್ ದಾಳಿಯಲ್ಲಿ ಆರು ಮಂದಿ ಗಾಯಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ