ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಐವರಿಗೆ ಗಂಭೀರ ಗಾಯ

ಬೆಂಗಳೂರು:

  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಮಂಗಳವಾರ ಸಂಭವಿಸಿದೆ.

   ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಐವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

   ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ಮೇಲೆ ಡಿವೈಡರ್​​​ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

Recent Articles

spot_img

Related Stories

Share via
Copy link
Powered by Social Snap