ಭಾರಿ ಮಳೆಗೆ ಜಲಾವೃತವಾದ ಕರಾವಳಿಯ 5 ತಾಲ್ಲೂಕುಗಳು ….!

ಬೆಂಗಳೂರು:

   2 ದಿನಗಳಿಂದ ಸುರಿಯುತ್ತಿರುವ ಅವ್ಯಾಹಸ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದೆ. ಹಲವೆಡೆ ಗುಡ್ಡ ಕುಸಿತದಿಂದ 11 ಜನ ಮೃತರಾಗಿರುವ ಶಂಕೆ ವ್ಯಕ್ತವಾಗಿದ್ದು, ಐದು ಮೃತದೇಹ ಪತ್ತೆಯಾಗಿದೆ.

   ಜಿಲ್ಲೆಯ ಕರಾವಳಿಯ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಅಕ್ಷರಶಃ ದ್ವೀಪದಂತಾಗಿದೆ. ಕರಾವಳಿಯ ಐದೂ ತಾಲೂಕುಗಳ ಬಹುತೇಕ ಭಾಗ ಜಲಾವೃತ್ತವಾಗಿದ್ದು, ಮನೆಯಿಂದ ಹೊರ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಜನರ ಆಕ್ರಮಂದ ಮುಗಿಲು ಮುಟ್ಟಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

   ಅಂಕೋಲಾ ಬಳಿ ಕುಸಿದ ಗುಡ್ಡದ ಅಡಿಯಲ್ಲಿ ಸಿಲುಕಿ ಒಂದೇ ಕುಟುಂಬದ ಐವರು ಹಾಗೂ ಟ್ಯಾಂಕರ್ ಮತ್ತು ಕಾರಿನಲ್ಲಿದ್ದ ನಾಲ್ವರು ಮತ್ತು ಉಳುವರೆಯಲ್ಲಿ ಓರ್ವ ಮಹಿಳೆ ಸೇರಿ 10 ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

   ಕಾರವಾರದ ಕಿನ್ನರದಲ್ಲಿ ಮನೆ ಕುಸಿದು ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯ ಮೃತದೇಹ ಹೊರ ತೆಗೆಯಲಾಗಿದೆ. ಅಪಾಯಕಾರಿ ಅನಿಲ ಇರುವ ಟ್ಯಾಂಕರ್ ನದಿಯಲ್ಲಿ ಕೊಚ್ಚಿಹೋಗಿದೆ. ಹೆದ್ದಾರಿಗಳು ಬಂದ್ ಆಗಿ ಕರಾವಳಿ ದ್ವೀಪದಂತಾಗಿವೆ. ನೂರಾರು ಮನೆಗಳು ಜಲಾವೃತ್ತವಾಗಿವೆ. ಕರಾವಳಿ ಜನರ ಬದುರು ಮೂರಾಬಟ್ಟೆಯಾಗಿದೆ.

   ಈ ನಡುವೆ ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತದ ರಭಸಕ್ಕೆ ಅಪಾಯಕಾರಿ ಅನಿಲ ಇರುವ ಟ್ಯಾಂಕರ್ ಗಂಗಾವಳಿ ನದಿಗೆ ಕೊಚ್ಚಿ ಹೋಗಿದ್ದು, ಅನಿಲ ಸೋರಿಕೆಯಿಂದ ಅಪಾಯದ ಸಾಧ್ಯತೆಯನ್ನು ಮನಗಂಡು ನದಿ ತೀರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಕಾರ್ಯ ನಡೆದಿದೆ.

   ಏತನ್ಮಧ್ಯೆ ಅಂಕೋಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ಪೂ.5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap