ಬೆಂಗಳೂರು:
50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಿವಮೊಗ್ಗದ ಬಿ.ಜೆ.ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಉನ್ನತ ಮಟ್ಟದ ಸಮಿತಿಯನ್ನು ಕೆಟಿಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ . ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿ ಕಾಯ್ದೆಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಬೇಕು. ಈ ಸಮಿತಿಯು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ. ಸರ್ಕಾರದ ಎಲ್ಲ ಇಲಾಖೆಗಳ 50 ಕೋಟಿ ರೂ. ಮೀರಿದ ಟೆಂಡರ್ ಗಳಿಗೂ ಈ ನಿಯಮ ಜಾರಿಯಾಗುತ್ತದೆ. ಟೆಂಡರ್ ಗಳು ಹೆಚ್ಚಾದ ಸಂದರ್ಭದಲ್ಲಿ ಶೀಘ್ರ ಟೆಂಡರ್ ಪರಿಶೀಲನೆಗೆ ಅನುಕೂಲವಾಗುವಂತೆ ಪರ್ಯಾಯ ಸಮಿತಿಯೊಂದನ್ನೂ ರಚಿಸಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
