ಬೆಂಕಿಯ ಕೆನ್ನಾಲಿಗೆಗೆ 50 ಎಕರೆ ಅರಣ್ಯ ನಾಶ

ಚಿಕ್ಕಮಗಳೂರು

     ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹಿರೇಗೌಜ ಗ್ರಾಮಕ್ಕೆ ಹೊಂದಿ ಕೊಂಡಿರುವ ಹಿರೇಗೌಜ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಮಾರು 50 ಎಕರೆ ಅರಣ್ಯ ಪ್ರದೇಶ ಕ್ಷಣ ಮಾತ್ರದಲ್ಲಿ ಸುಟ್ಟು ಬೂದಿಯಾಗಿದೆ. ಬೆಂಕಿ ಹತ್ತಿದ್ದ ವೇಳೆ ತೀವ್ರ ಗಾಳಿ ಬೀಸಿದ್ದರಿಂದ ಅರಣ್ಯಕ್ಕೆ ಭಾರೀ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

        ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಟ್ಟಿದ್ದಾರೆ. ಆದರೂ ಬೆಂಕಿ ನಿಯಂತ್ರಣಕ್ಕೆ ಬಾರದ ಪರಿಣಾಮ ಸುಮಾರು 50 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಸತತ ಕಾರ್ಯಾಚರಣೆ ಬಳಿಕ ಸಂಜೆ ವೇಳೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಘಟನೆಯಲ್ಲಿ ಅಪಾರ ಪ್ರಮಾಣದಲ್ಲಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap