ಬೆಂಗಳೂರು:
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲು ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಪ್ರತಿ ವರ್ಷ ಒಂದು ಕೋಟಿ ರೂಪಾಯಿ ಅನುದಾನ ನೀಡುವಂತೆ ಸಚಿವರು ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ