ರಾಮನಗರ:
ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ತಿಂದು ಅಸ್ವಸ್ಥರಾಗಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ಭಾನುವಾರ ನಡೆದಿದೆ.
ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್ಪಾಡಾಗಿತ್ತು. ಊಟದ ನಂತರ ಐಸ್ ಕ್ರೀಂ ಸೇವಿಸಿದವರಿಗೆ ಅರ್ಧ ಗಂಟೆಯ ಬಳಿಕ ವಾಂತಿ, ಭೇದಿ ಶುರುವಾಗಿದೆ. ಅವಧಿ ಮುಗಿದ ಐಸ್ ಕ್ರೀಂ ಎನ್ನಲಾಗಿದೆ
ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳಾದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.