ನವದೆಹಲಿ:
ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಗಲೇ ಮತ್ತೊಂದು ಬರೆ ಬಿದ್ದಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 949.50 ರೂಪಾಯಿ ಇದ್ದ 14.2 ಕೆಜಿ ತೂಕದ ಸಿಲಿಂಡರ್ ಬೆಲೆ 999.50 ರೂ.ಗೆ ಏರಿಕೆಯಾಗಿದೆ.
ಮೇ 1ರಂದು ವಾಣಿಜ್ಯ ಬಳಕೆಯ ಸಿಲಿಂಡರ್ನ ಬೆಲೆಯಲ್ಲಿ 102.50 ರೂಪಾಯಿ ಏರಿಕೆ ಮಾಡಲಾಗುತ್ತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,335.50 ರೂಪಾಯಿ ತಲುಪಿದೆ. ಇದಕ್ಕೂ ಮುನ್ನ ಅಂದರೆ ಏಪ್ರಿಲ್ 1ರಂದು 250 ರೂಪಾಯಿ ಏರಿಕೆಯಾಗಿ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,253 ರೂಪಾಯಿ ತಲುಪಿತ್ತು.
ರಾಜ್ಯಕ್ಕೆ ಮತ್ತೊಂದು ಬಿಗ್ ಶಾಕ್ : ಒಮಿಕ್ರಾನ್‌ನ BA.4, BA.5 ಉಪತಳಿ ಪತ್ತೆ
ಈ ಹಿಂದೆ ಮಾರ್ಚ್ 22 ರಂದು ಅಡುಗೆ ಅನಿಲದ ಬೆಲೆಯನ್ನು 50 ರೂಪಾಯಿ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 50 ರೂ. ಹೆಚ್ಚಿಸಿದ್ದು, ಈ ದರ ಇಂದಿನಿಂದಲೇ ಜಾರಿಯಲ್ಲಿದೆ. ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಗಲೇ ಮತ್ತೊಂದು ಬರೆ ಬಿದ್ದಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 949.50 ರೂಪಾಯಿ ಇದ್ದ 14.2 ಕೆಜಿ ತೂಕದ ಸಿಲಿಂಡರ್ ಬೆಲೆ 999.50 ರೂ.ಗೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ