ಮೊದಲ ದಿನವೆ 500 ಮಂದಿ ನಾಮಪತ್ರ ಸಲ್ಲಿಕೆ..!

ಬೆಂಗಳೂರು :

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದ ಹಲವು ಸಚಿವರು ಸೇರಿದಂತೆ ಐನೂರಕ್ಕೂ ಹೆಚ್ಚು ಮಂದಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಅಧಿಸೂಚನೆ ಹೊರಬೀಳುತ್ತಿದ್ದಂತೆಯೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಯಿತಲ್ಲದೆ, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

    ಸಚಿವರಾದ ಮುರುಗೇಶ್ ನಿರಾಣಿ, ಎಸ್.ಟಿ.ಸೋಮಶೇಖರ್, ಡಾ.ಸುಧಾಕರ್ ಸೇರಿದಂತೆ ಸಚಿವರು ಮತ್ತು ವಿವಿಧ ಪಕ್ಷಗಳ ಹಾಲಿ ಸಚಿವರು ತಮ್ಮ ಸ್ವಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದರು. ಈಗಾಗಲೇ ಆಡಳಿತಾರೂಢ ಬಿಜೆಪಿ ಎರಡು ಕಂತಿನಲ್ಲಿ 212 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಕೂಡ ಎರಡು ಕಂತುಗಳಲ್ಲಿ 166 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಈ ಮಧ್ಯೆ ದೇವೇಗೌಡರ ನೇತೃತ್ವದ ಜಾತ್ಯತೀತ ಜನತಾದಳ ಒಂದು ಕಂತಿನಲ್ಲಿ 93 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶುಕ್ರವಾರ ಎರಡನೇ ಕಂತಿನ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ನಾಮಪತ್ರ ಸಲ್ಲಿಸಲು ಆರಂಭದ ದಿನವಾದ ಗುರುವಾರ ವಿವಿಧ ಪಕ್ಷಗಳ ಹಾಲಿ ಶಾಸಕರು, ಮಾಜಿ ಶಾಸಕರು ಮತ್ತು ಪಕ್ಷೇತರರು ಸೇರಿದಂತೆ ಐನೂರಕ್ಕೂ ಹೆಚ್ಚು ಮಂದಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಬಾರಿ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಬಲ ಪೈಪೋಟಿ ನಡೆಯುವುದು ನಿಶ್ಚಿತವಾಗಿದ್ದು, ಬಹುತೇಕ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದ್ದು, ಆಡಳಿತಾರೂಢ ಬಿಜೆಪಿ, ಪ್ರಮುಖ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯುವುದು ನಿಶ್ಚಿತವಾಗಿದೆ.

    ಈ ಮಧ್ಯೆ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್‌ಆದ್ಮಿ ಪಕ್ಷ, ಗಾಲಿ ಜನಾರ್ಧನ ರೆಡ್ಡಿ ಅವರ ಕರ್ನಾಟಕ ರಾಜ್ಯ ಪ್ರಗತಿ ವಿಕಾಸ ಪಕ್ಷ ಸೇರಿದಂತೆ ಹಲವು ಪಕ್ಷಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿವೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕಡೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆ ಕಾರ್ಯ ಏಪ್ರಿಲ್ 21 ರಂದು ನಡೆಯಲಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ಏಪ್ರಿಲ್ 24 ಕೊನೆಯ ದಿನವಾಗಿರುತ್ತದೆ. ನಾಮಪತ್ರ ಸಲ್ಲಿಕೆಗೆ ಕೇವಲ ಏಳು ದಿನಗಳ ಕಾಲಾವಕಾಶವಿದ್ದು, ಇದರಲ್ಲಿ ಎರಡು ದಿನಗಳ ಸಾರ್ವತ್ರಿಕ ರಜೆ ಇದೆ. ಆ ದಿನಗಳಲ್ಲಿ ನಾಮಪತ್ರ ಸಲ್ಲಿಸಲು ಅವಕಾಶವಿರುವುದಿಲ್ಲ. ಮೇ 10 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು ಮತ ಎಣಿಕೆ ಕಾರ್ಯ ಮೇ 13 ರಂದು ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

    ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಬಿ.ಸಿ.ಪಾತ್ರಾ ಅವರು ಚುನಾವಣೆಗೆ ಸಂಬAಧಿಸಿದAತೆ ಅಧಿಸೂಚನೆ ಹೊರಡಿಸಿರುವುದಲ್ಲದೆ, ನಾಮಪತ್ರ ಸಲ್ಲಿಕೆ ಮಾಡುವವರಿಗೆ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು ಐದು ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಛೇರಿ ಪ್ರವೇಶಿಸಲು ಅವಕಾಶ ನೀಡಲಾಗಿದೆ. ನಾಮಪತ್ರ ಸಲ್ಲಿಸುವ ಕಛೇರಿಯಿಂದ ನೂರು ಮೀಟರ್ ಹೊರಗೆ ಅಭ್ಯರ್ಥಿಗಳು ತಮ್ಮ ವಾಹನವನ್ನು ನಿಲ್ಲಿಸುವುದಲ್ಲದೆ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ತುಮಕೂರು ಜಿಲ್ಲೆಯಲ್ಲಿ 14 ನಾಮಪತ್ರ ಸಲ್ಲಿಕೆ…!

     ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 14 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap