ಜಲ ಕ್ಷಾಮ : ನೀರನ್ನು ದುರ್ಬಳಕೆ ಮಾಡಿದರೆ 5000 ದಂಡ : ಜಲ ಮಂಡಳಿ

ಬೆಂಗಳೂರು:

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ನಗರದ ಈಜುಕೊಳಗಳಿಗೆ ಕಾವೇರಿ ನೀರು ಬಳಸಬಾರದು ಎಂದು ಬೆಂಗಳೂರು ಜಲಮಂಡಲಿ ಆದೇಶಿಸಿದೆ. ನಿಯಮ ಉಲ್ಲಂಘಿಸಿದ್ದಲ್ಲಿ ರೂ.5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

   ಜಲಮಂಡಳಿ ಕಾಯ್ದೆ 1964ರ ಕಲಂ 109ರಂತೆ ಈಜು ಕೊಳ ಉದ್ದೇಶಗಳಿಗೆ ಕಾವೇರಿ ನೀರು ಬಳಸಿದಲ್ಲಿ 5000 ರೂ. ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ 5000 ರೂ. ಜತೆಗೆ ಹೆಚ್ಚುವರಿಯಾಗಿ ಪ್ರತಿ ದಿನ 500 ರೂ. ದಂಡ ವಿಧಿಸಲಾಗುವುದು. ಹಾಗೆಯೇ, ಈಜುಕೊಳದ ಮಾಲೀಕರ ವಿರುದ್ಧ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

   ಬೆಂಗಳೂರಿನಲ್ಲಿ ಬರೋಬ್ಬರಿ 1.40 ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಆದರೆ, ಈ ವರ್ಷ ಮಳೆಯ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅಂರರ್ಜಲ ಮಟ್ಟ ಕುಸಿತವಾಗಿದೆ. ಹೀಗಾಗಿ, ಜನರು ಕಾವೇರಿ ನದಿಯಿಂದ ಪೂರೈಕೆ ಮಾಡುವ ಕುಡಿಯುವ ನೀರನ್ನು ಅನ್ಯ ಉದ್ದೇಶವಾದ ಸ್ವಿಮ್ಮಿಂಗ್‌ ಪೂಲ್‌ಗೆ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ‘ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಈಜು ಕೊಳ ಉದ್ದೇಶಗಳಿಗೆ ಬಳಸುವುದನ್ನು’ ನೀಷೇದಿಸಲಾಗಿದೆ.

    ಬೆಂಗಳೂರಿನಲ್ಲಿ ವಾಸವಿರುವ ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದೆ. ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕುಡಿಯುವ ನೀರನ್ನು ಮನೆ ಮುಂದಿನ ಕೈದೋಟಗಳು, ಕಾರು ಮತ್ತು ಇತರೆ ವಾಹನಗಳ ಸ್ವಚ್ಛಗೊಳಿಸಲು, ಕಟ್ಟಡ ನಿರ್ಮಾಣ ಸೇರಿ ಇತರೆ ಕಾರ್ಯಗಳಿಗೆ ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ. ಈಗ ಸ್ವಿಮ್ಮಿಂಗ್ ಪೂಲ್‌ಗೂ ಕುಡಿಯುವ ನೀರನ್ನು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ.

    ಇನ್ನು ಬೆಂಗಳೂರು ಜಲಮಂಡಳಿಯ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಹಾಗೂ ಉಲ್ಲಂಘನೆ ಮಾಡುವವರ ವಿರುದ್ಧ ಜಲಮಂಡಳಿಯ ಕಾಯ್ದೆ 1964ರ ಕಲಂ 109ರಂತೆ 5,000ರೂ.ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ 5 ಸಾವಿರ ರೂ. ಜೊತೆಗೆ ಹೆಚ್ಚುವರಿಯಾಗಿ ಪ್ರತಿ ದಿನಕ್ಕೆ ತಲಾ 500 ರೂ. ಹೆಚ್ಚುವರಿಯಾಗಿ ದಂಡ ಹಾಕಲಾಗುವುದು. ಹಾಗೆಯೇ, ಈಜುಕೊಳದ ಮಾಲೀಕರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

    ಇನ್ನು ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಬೆಂಗಳೂರು ಜಲಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916ಗೆ ತಿಳಿಸಬಹುದಾಗಿದೆ ಎಂದು ಹೇಳಿದೆ.

Recent Articles

spot_img

Related Stories

Share via
Copy link
Powered by Social Snap