ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

 ಬೆಳ್ತಂಗಡಿ: 

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು.

         ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೇ ಭರಿಸಲಾಗುತ್ತದೆ.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,393 ಜೋಡಿ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್‌ 15ರೊಳಗೆ ಸ-ವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್‌ ನಂ. 8147263422.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap