ತುಮಕೂರು:
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳನ್ನು ಬಿಟ್ಟು ಬಿಡದೆ ಕಾಡುತ್ತಿರುವ ಸೋಂಕಿನ ಕಾರಣ ನಗರದ ಸಿದ್ದಗಂಗಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ರೀಗಳನ್ನು ವೈದ್ಯರ ಸಲಹೆ ಮೇರೆಗೆ ಸಿದ್ದಗಂಗಾ ಆಸ್ಪತ್ರೆ ಆ್ಯಂಬುಲೆನ್ಸ್ ಮೂಲಕ ಮಠದಿಂದ ಆಸ್ಪತ್ರೆಗೆ ಕರೆತರಲಾಗಿದೆ. ಸೋಂಕು ತಜ್ಞ ಡಾ. ಸುಬ್ರ ಇಂದು ಸಂಜೆ ಶ್ರೀಗಳನ್ನ ತಪಾಸಣೆ ಮಾಡಿದ್ದರು. ಸೋಂಕು ಸಂಪೂರ್ಣವಾಗಿ ನಿವಾರಿಸಲು ಶ್ರೀಗಳನ್ನ ಸಿದ್ದಗಂಗಾ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ