ನವದೆಹಲಿ:
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ 5ನೇ ಆರೋಪಿ ಲಲಿತ್ ಝಾ ರಾಜಸ್ಥಾನದಲ್ಲಿ ಕೊನೆಯದಾಗಿ ಪತ್ತೆಯಾಗಿದ್ದ ಎಂದು ತಿಳಿದುಬಂದಿದೆ.
ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ 5ನೇ ಆರೋಪಿ, ಪ್ರಸ್ತುತ ತಲೆಮರೆಸಿಕೊಂಡಿರುವ ಲಲಿತ್ ಝಾ ಜಾಡು ಕೊನೆಗೂ ಪತ್ತೆಯಾಗಿದ್ದು, ಕೊನೆಯದಾಗಿ ಆತ ರಾಜಸ್ಥಾನದ ನೀಮ್ರಾನಾದಲ್ಲಿ ಪತ್ತೆಯಾಗಿದ್ದ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ. ಈ ಪ್ರಕರಣದಲ್ಲಿ ಕರ್ನಾಟಕ ಮೂಲದ ಆರೋಪಿ ಸೇರಿದಂತೆ ಪ್ರಕರಣದಲ್ಲಿ ಇದುವರೆಗೆ ಐದು ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವಿಕ್ಕಿ ಮತ್ತು ಆತನ ಪತ್ನಿ ಎಂದು ಗುರುತಿಸಲಾಗಿರುವ ಇಬ್ಬರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
ಮೂಲಗಳ ಪ್ರಕಾರ, ಆರೋಪಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಪ್ರಕರಣದ ನೇತೃತ್ವ ವಹಿಸಿದ್ದರು. ಲಲಿತ್ ಝಾ ಮತ್ತು ಇತರರು ಘಟನೆಯಲ್ಲಿ ಭಾಗಿಯಾಗಿರುವ ಇತರರಿಗೆ ಪಾಸ್ ವ್ಯವಸ್ಥೆ ಮಾಡಿದ್ದರು. ಘಟನೆಗೆ ಮುಂಚಿತವಾಗಿ ಅವರು ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಎಲ್ಲಾ ಆರೋಪಿಗಳು ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಎಂಬ ಸಾಮಾಜಿಕ ಮಾಧ್ಯಮ ಪೇಜ್ ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ಉಲ್ಲೇಖಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ