6 ತಿಂಗಳುಗಳಲ್ಲಿ ಅಪಘಾತದಲ್ಲಿ 5830 ಜನ ಸಾವು : ಅಲೋಕ್‌ ಕುಮಾರ್

ಬೆಂಗಳೂರು: 

      ಆರು ತಿಂಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 5,830 ಜನರು ಸಾವನ್ನಪ್ಪಿದ್ದಾರೆ. ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

     ಕಳೆದ ಮೇ ನಲ್ಲಿ 1,094 ಜನ, ಜೂನ್ ನಲ್ಲಿ 965, ಜುಲೈನಲ್ಲಿ 807, ಆಗಸ್ಟ್ ನಲ್ಲಿ 795 ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

     ಬೆಂಗಳೂರು ನಗರ, ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ರಸ್ತೆ ಅಪಘಾತಗಳು ನಡೆಯುತ್ತಿವೆ. ಜನರ ಪ್ರಾಣ ಉಳಿಸಲು ರಸ್ತೆ ಸುರಕ್ಷತಾ ಉಪಕ್ರಮಗಳನ್ನು ನಿರಂತರ ಹಾಗೂ ವ್ಯಾಪಕವಾಗಿ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap