ಮಳೆ ಅಪ್‌ ಡೇಟ್‌ : ರಾಜ್ಯದಲ್ಲಿ 6 ದಿನ ಮಳೆ ಸಾಧ್ಯತೆ …!

ಬೆಂಗಳೂರು:

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಮಳೆಯಾಗಿದ್ದು ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

    ರಾಜ್ಯದಲ್ಲಿ ಇಂದಿನಿಂದ ಮೇ 16ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ.

 

   ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ
    ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

 

Recent Articles

spot_img

Related Stories

Share via
Copy link
Powered by Social Snap