ಗುಜರಾತ್
ಗುಜರಾತ್ನ ಆನಂದ್ ಬಳಿ ಬಸ್’ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.ಇಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದು ನಿಂತಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ, ಎಕ್ಸ್‌ಪ್ರೆಸ್ ಹೈವೇ ಪೆಟ್ರೋಲಿಂಗ್ ತಂಡ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಬಳಿಕ ಎಲ್ಲಾ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದಾರೆ. ಡಿಕ್ಕಿಯ ನಂತರ ಬಸ್ ಮತ್ತು ಟ್ರಕ್ ತೀವ್ರವಾಗಿ ಜಖಂಗೊಂಡಿದೆ.